ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದೇಶಿ ವಸ್ತುಗಳ ಮೇಲೆ ಭಾರಿ ತೆರಿಗೆ ಘೋಷಣೆ ಮಾಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಸ್ಟೀಲ್ ಮತ್ತು ಅಲ್ಯುಮಿನಿಯಂ ಮೇಲಿನ ಆಮದು ತೆರಿಗೆಯನ್ನು ಹೆಚ್ಚು ಮಾಡಿದ್ದಾರೆ.
ಈಗ ಶೇ.25ರಷ್ಟು ತೆರಿಗೆಯನ್ನು ಹೆಚ್ಚಿಸುವ ಮೂಲಕ ಅಧಿಕೃತವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆರಿಗೆ ಯುದ್ಧದ ಕಿಡಿಹಚ್ಚಿದ್ದಾರೆ. ಈ ಹೊಸ ನಿಯಮ ಬುಧವಾರದಿಂದಲೇ ಜಾರಿಗೆ ಬಂದಿದೆ. ಇದಲ್ಲದೆ ಕೆನಡಾ, ಮೆಕ್ಸಿಕೋ ಮತ್ತು ಚೀನಾ ಮೇಲೆ ಪ್ರತ್ಯೇಕ ತೆರಿಗೆ ಹೇರಿರುವ ಅವರು, ಬ್ರೆಜಿಲ್, ದಕ್ಷಿಣ ಕೊರಿಯಾ ಮತ್ತು ಯುರೋಪಿಯನ್ ಯೂನಿಯನ್‌ನಿಂದ ಆಮದು ಮಾಡುವ ವಸ್ತುಗಳ ಮೇಲೂ ಏ.2ರಿಂದ ತೆರಿಗೆ ವಿಧಿಸಲು ಮುಂದಾಗಿದ್ದಾರೆ.
ಕುಸಿಯುತ್ತಿರುವ ಅಮೆರಿಕದ ಆರ್ಥಿಕತೆಯ ವೇಗವನ್ನು ಈ ತೆರಿಗೆಯಿಂದ ಸಂಗ್ರಹಿಸಿದ ಹಣದಿಂದ ಮೇಲೆತ್ತಲು ಸಾಧ್ಯವಾಗಲಿದೆ. ತೆರಿಗೆ ಹಣದಿಂದ ದೇಶೀ ಉತ್ಪಾದನಾ ವಲಯಕ್ಕೆ ಪ್ರೋತ್ಸಾಹ ಸಿಗಲಿದ್ದು, ಉದ್ಯೋಗ ಸೃಷ್ಟಿಯಾಗಲಿದೆ ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.