ಶ್ರೀಲಂಕಾ ವಿರುದ್ಧ ಭರ್ಜರಿ ಶತಕ: ಸಚಿನ್ ದಾಖಲೆ ಮುರಿದ ಕೊಹ್ಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ವರ್ಷದ ಮೊದಲ ಏಕದಿನ ಸರಣಿಯಲ್ಲಿ 2 ಶತಕ ಸಿಡಿಸುವ ಮೂಲಕ ಸಚಿನ್ ತೆಂಡೂಲ್ಕರ್ (Sachin Tendulkar) ದಾಖಲೆಯನ್ನ ಮುರಿದಿದ್ದಾರೆ.

ಅಂತಿಮ ಪಂದ್ಯದಲ್ಲಿ 85 ಎಸೆತಗಳಲ್ಲಿ ಶತಕ ಸಿಡಿಸಿದ ಕೊಹ್ಲಿ, ಸ್ವದೇಶದಲ್ಲಿ 21 ಶತಕ ಸಿಡಿಸಿದ ದಾಖಲೆ ಮಾಡಿದ್ದಾರೆ. ಮುಖ್ಯವಾಗಿ ಏಕದಿನ ಪಂದ್ಯದಲ್ಲೀ ಶ್ರೀಲಂಕಾ (SriLanka) ವಿರುದ್ಧವೇ 10 ಶತಕ ಸಿಡಿಸಿ ತೆಂಡೂಲ್ಕರ್ ದಾಖಲೆಯನ್ನ ಮುರಿದಿದ್ದಾರೆ.

ಸಚಿನ್ ತೆಂಡೂಲ್ಕರ್ 164 ಪಂದ್ಯಗಳ 102 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದರೆ ಕೊಹ್ಲಿ 104 ಪಂದ್ಯಗಳ 101 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ . ಏಕದಿನದಲ್ಲಿ ಕೊಹ್ಲಿ ಒಟ್ಟು 46 ಶತಕ ಹೊಡೆದಿದ್ದು, ಲಂಕಾ ವಿರುದ್ಧವೇ 10 ಶತಕ ಬಾರಿಸಿದ್ದಾರೆ. ಈ ಹಿಂದೆ ಸಚಿನ್ ಲಂಕಾ ವಿರುದ್ಧ 9 ಶತಕ ಹೊಡೆದಿದ್ದರು.

ಈವರೆಗೆ ಒಟ್ಟಾರೆಯಾಗಿ 74 ಶತಕ ಸಿಡಿಸಿರುವ ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ (ODI Cricket) 46 ಶತಕ ಸಿಡಿಸಿದ್ದಾರೆ. ಇನ್ನೂ 3 ಶತಕ ಸಿಡಿಸಿದರೆ ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ವಿಶ್ವದ ನಂ.1 ಆಟಗಾರ ಅಗಲಿದ್ದಾರೆ. ಜೊತೆಗೆ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಒಟ್ಟು 100 ಶತಕ ಬಾರಿಸಿರುವ ಸಚಿನ್ ಟೆಸ್ಟ್ನಲ್ಲಿ 51 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳನ್ನ ಸಿಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!