May 3, 2026
Sunday, May 3, 2026
spot_img

ಶೃಂಗೇರಿ ಅಂಚೆ ಮತಗಳ ಮರು ಎಣಿಕೆಯ ಹಿಂದೆ ದೊಡ್ಡ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿನ ಅಂಚೆ ಮತ ಮರು ಎಣಿಕೆಯ ಹಿಂದೆ ದೊಡ್ಡ ಷಡ್ಯಂತ್ರ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.

ಮಾಧ್ಯಮಗಳಿಗೆ ಈ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, ಈ ರೀತಿ ಆಗುತ್ತೆ ಎಂದು ಊಹೆ ಮಾಡಿರಲಿಲ್ಲ. ಇದರ ಹಿಂದೆ ದೊಡ್ಡ ಪ್ರಮಾಣದಲ್ಲಿ ಷಡ್ಯಂತ್ರ ಹಾಗೂ ವ್ಯವಸ್ಥಿತ ಅಪರಾಧ ನಡೆದಿದೆ. ಇದು ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಕಿಡಿಕಾರಿದರು.

ಮಾಜಿ ಶಾಸಕ ಡಿ ಎನ್​ ಜೀವರಾಜ್ ಅವರು ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳಲ್ಲಿ ಅಕ್ರಮ ಎಸಗಿದ್ದಾರೆ. ಈಗಾಗಲೇ ಮತ ಎಣಿಕೆ ಬಳಿಕ ಏಜೆಂಟರು ಹಾಗೂ ಅಧಿಕಾರಿಗಳು ಸಹಿ ಹಾಕಿದ್ದಾರೆ ಅಂದ ಮೇಲೆ ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಈ ವಿಚಾರವಾಗಿ ದೊಡ್ಡ ತನಿಖೆ ಆಗಬೇಕು. ನಾವು ಕಾನೂನು ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !