ಮುಂದಿನ 3 ತಿಂಗಳು ಕಾದಿದೆ ಭಾರೀ ಗಂಡಾಂತರ: ಮತ್ತೆ ಭವಿಷ್ಯ ನುಡಿದ ಕೋಡಿಮಠ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್‌

ಮುಂದಿನ ಮೂರು ತಿಂಗಳು ಭಾರತ ಸೇರಿದಂತೆ ಇಡೀ ಜಗತ್ತಿಗೆ ಭಾರೀ ಕಂಟಕ ಕಾದಿದೆ ಎಂದು ಕೋಡಿ ಮಠದ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಳ್ಳಿಯಲ್ಲಿರುವ ಕೋಡಿ ಮಠದಲ್ಲಿ ಮಾತನಾಡಿದ ಅವರು, ಕಾರ್ತಿಕ, ಮಾರ್ಗಶಿರದಿಂದ ತೊಡಗಿ ಜನವರಿ ಪ್ರಥಮ ಭಾಗದವರೆಗೆ ಭಾರಿ ಲೋಕ ಕಂಟಕವಿದೆ.
ಅದು ಭೂ ಕಂಟಕದ ರೂಪದಲ್ಲಿರಬಹುದು, ಪ್ರಾದೇಶಿಕವಾಗಿಯೂ ಸಂಘರ್ಷವಿರಬಹುದು, ಪ್ರಾಕೃತಿಕಾಗಿಯೂ ಇರಬಹುದು, ರಾಜ ಬೀದಿಯೂ ಇರಬಹುದು ಎಂದು ಹೇಳಿದರು.

ಆದರೆ ರಾಜ ಬೀದಿಯ ವಿವರಣೆ ನೀಡಲಿಲ್ಲ. ಜಾಗತಿಕವಾಗಿ ಬಾಂಬ್‌ ಗಳು , ಭೂಕಂಪ, ಯದ್ಧ ಭೀತಿ ಇದೆ. ಇದು ಕೇವಲ ಜಗತ್ತಿಗೆ ಸಂಬಂಧಿಸಿದ್ದಲ್ಲ, ದೇಶಿಯಾಗಿ ಕೆಲವೊಂದು ಕಂಟಕಗಳಿವೆ ಎಂದು ಹೇಳಿದ್ದಾರೆ.

ಜನ ಜನಗಳ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗುತ್ತಾರೆ. ಹೆಚ್ಚಿನವರಿಗೆ ದೈಹಿಕ ಅಶಕ್ತಿ ಕಾಡಲಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!