ಕಿಚ್ಚ ಸುದೀಪ್ ಹುಟ್ಟು ಹಬ್ಬಕ್ಕೆ ಬಿಗ್ ಗಿಫ್ಟ್: ಆಕಾಶದ ನಕ್ಷತ್ರಕ್ಕೆಅಭಿನಯ ಚಕ್ರವರ್ತಿ ಹೆಸರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಿಚ್ಚ ಸುದೀಪ್ (Sudeep) ಅವರ ಹುಟ್ಟು ಹಬ್ಬಕ್ಕೆ ವಿಶೇಷ ಉಡುಗೊರೆ ಕೊಡಲು ಅರಸು ಕ್ರಿಯೇಷನ್ಸ್ (Arasu Creation) ಸಜ್ಜಾಗಿದ್ದು, ಹೀಗಾಗಿ ಸುದೀಪ್ ಅವರ ಹೆಸರನ್ನು ನಕ್ಷತ್ರವೊಂದಕ್ಕೆ (Nakshatra) ನಾಮಕರಣ ಮಾಡಿದ್ದು, ಅಧಿಕೃತವಾಗಿ ನೋಂದಣಿ ಕೂಡ ಮಾಡಿಸಿದೆ.

ಈ ಹಿಂದೆ ದಕ್ಷಿಣದ ಖ್ಯಾತ ನಟ ಮಹೇಶ್ ಬಾಬು ಅವರ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ಇಂಥದ್ದೊಂದು ನೋಂದಣಿ ಮಾಡಿಸಿದ್ದರು. ಅಲ್ಲದೇ, ಪುನೀತ್ ರಾಜ್ ಕುಮಾರ್ ಹೆಸರಿನಲ್ಲೂ ಒಂದು ನಕ್ಷತ್ರವಿದೆ. ಇದೀಗ ಅಂಥದ್ದೊಂದು ಗೌರವ ಸುದೀಪ್ ಪಾಲಾಗಿದೆ. ಮೀನ ರಾಶಿಯ ನಕ್ಷತ್ರ ಪುಂಜದಲ್ಲಿ ಕಾಣಸಿಗುವ ನಕ್ಷತ್ರವೊಂದಕ್ಕೆ ಸುದೀಪ್ ಹೆಸರು ಇಡಲಾಗಿದೆ.

ಕಿಚ್ಚ ಸುದೀಪ್ ಸೆಪ್ಟಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಕಿಚ್ಚೋತ್ಸವ ಈಗಾಗಲೇ ಫ್ಯಾನ್ಸ್ ಸಜ್ಜಾಗಿದ್ದಾರೆ

ಕಳೆದ ಎರಡು ವರ್ಷಗಳಿಂದ ಪಿ.ಆರ್.ಓ ಆಗಿ ಕನ್ನಡ ಮಾಧ್ಯಮದ ನಡುವೆ ಕೆಲಸ ಮಾಡುತ್ತಿರುವ ಹರೀಶ್ ಅರಸು ತಮ್ಮದೇ ಅರಸು ಕ್ರಿಯೇಷನ್ಸ್ ನಡಿ ಸುದೀಪ್ ಹುಟ್ಟಹಬ್ಬಕ್ಕೆ ಪ್ರೀತಿಯ ಉಡುಗೊರೆ ನೀಡಿದ್ದಾರೆ. ಆಕಾಶದ ನಕ್ಷತ್ರಕ್ಕೆ ಕಿಚ್ಚ ಸುದೀಪ್ ಎಂದು ನಾಮಕರಣ ಮಾಡಿದ್ದಾರೆ. ಈ ಜಗತ್ತಿನಲ್ಲಿರುವ ರತ್ನಗಳಲ್ಲಿ ನೀನೇ ಅತ್ಯಮೂಲ್ಯ. ಇಂದು ನಕ್ಷತ್ರ ಹುಟ್ಟಿದ ದಿನವನ್ನು ನಾವು ಆಚರಿಸುತ್ತೇವೆ. ಆದರೆ ಆಕಾಶದಲ್ಲಿ ಅಲ್ಲ ಭೂಮಿಯಲ್ಲಿ ಎಂಬ ಅರ್ಥಪೂರ್ಣ ಸಂದೇಶ ನೀಡಿದೆ.

ಇನ್ನು ಕಿಚ್ಚ ಸುದೀಪ್ ಬರ್ತ್ ಡೇ 46ನೇ ಸಿನಿಮಾದ ಟೈಟಲ್ ರಿವೀಲ್ ಆಗಲಿದೆ. ಮಧ್ಯರಾತ್ರಿ 12ಕ್ಕೆ ಶೀರ್ಷಿಕೆ ಘೋಷಣೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!