ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟ: ವಸಂತ ನಾಡಿಗೇರ ನಿಧನಕ್ಕೆ ಸಿಎಂ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರು ತೀವ್ರ ಹೃದಯಾಘಾತದಿಂದಾಗಿ ಇಂದು ನಿಧನರಾಗಿದ್ದಾರೆ.

ಮೃತರ ಆತ್ಮಕ್ಕೆ ಸಿಎಂ ಸಿದ್ದರಾಮಯ್ಯ ಶಾಂತಿ ಕೋರಿದ್ದಾರೆ.  ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್‌ ಮಾಡಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!