Wednesday, June 29, 2022

Latest Posts

BIG NEWS | ಆಧಾರ್ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಆಧಾರ್ ಕಾರ್ಡ್ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಕೇಂದ್ರ ಸರ್ಕಾರದ ಪ್ರಮುಖವಾದ ಆಧಾರ್ ಕಾರ್ಡ್ ಯೋಜನೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಲ್. ನಾಗೇಶ್ವರರಾವ್ ಅವರನ್ನೊಳಗೊಂಡ ನ್ಯಾಯಾಧೀಶರ ಪೀಠದಿಂದ 2018 ರ ಸೆ.26 ರಂದು ಆಧಾರ್ ಸಾಂವಿಧಾನಿಕವಾಗಿ ಮಾನ್ಯವೆಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ‘ಸುಪ್ರೀಂ’ ವಜಾಗೊಳಿಸಿದೆ. ನ್ಯಾ. ಚಂದ್ರಚೂಡ್ ಅವರು ಬಹುಮತದ ಆಧಾರದ ಮೇಲೆ ನೀಡಿದ ಆದೇಶದ ಕುರಿತಾಗಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss