ಹೊಸದಿಗಂತ ಡಿಜಿಟಲ್ ಡೆಸ್ಕ್:
ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್ ನಲ್ಲ್ಲೂ ಕಮಾಲ್ ಮಾಡಿದ್ದೂ, ಇಬ್ಬರ ಮಾರಕ ಸ್ಪಿನ್ ಗೆ ಶ್ರೀಲಂಕಾ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲುವ ಮೂಲಕ ಭಾರತ ಇನ್ನಿಂಗ್ಸ್ ಹಾಗೂ 222 ರನ್ಗಳ ಬೃಹತ್ ಅಂತರದ ಜಯ ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ 1-0ಯಲ್ಲಿ ಮುನ್ನಡೆ ಸಾಧಿಸಿದೆ.
ಭಾರತ ನೀಡಿದ್ದ 574 ರನ್ ನ ಬೆನ್ನಟ್ಟಿದ ಲಂಕಾ ಆಟಗಾರರರು ಮೊದಲ ಇನ್ನಿಂಗ್ಸ್ ನಲ್ಲಿ 174 ಆಲೌಟ್ ಆಗಿ, ಮತ್ತೆ ಬ್ಯಾಟಿಂಗ್ ಆರಂಭಿಸಿತ್ತು. ಆದರೆ ಎರಡನೇ ಇನ್ನಿಂಗ್ಸ್ ನಲ್ಲೂ ಎಡವಿದ ಲಂಕಾ ಕೇವಲ 178 ರನ್ಗಳಿಗೆ ಆಲೌಟ್ ಮಾಡುವ ಹೀನಾಯ ಸೋಲು ಅನುಭವಿಸಿದೆ.