Tuesday, January 19, 2021

Latest Posts

BIG NEWS | ಸುಳ್ಯದ ಬಂಗಾರ ಅಂಗಾರ ಸಹಿತ ಬಿಎಸ್‌ವೈ ಸಂಪುಟಕ್ಕೆ ಸಪ್ತ ಸಚಿವರ ಬಲ!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ರಾಜ್ಯ ಸಚಿವ ಸಂಪುಟದ ನೂತನ ಸಚಿವರುಗಳಾಗಿ ಏಳು ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.
ಇವರ ಪೈಕಿ ಸುಳ್ಯ ಶಾಸಕ ಎಸ್.ಅಂಗಾರ ಅವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
ಹುಕ್ಕೇರಿ ಶಾಸಕ ಉಮೇಶ್ ಕತ್ತಿ ದೇವರ ಹೆಸರಿನಲ್ಲಿ, ಮಹದೇವಪುರ ಶಾಸಕ ಅರವಿಂದ ಅವರು ದೇವರ ಹೆಸರಿನಲ್ಲಿ, ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಅವರು ದೇವರ ಹೆಸರಿನಲ್ಲಿ, ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ ದೇವರು, ರೈತರ ಹೆಸರಿನಲ್ಲಿ, ವಿಧಾನ ಪರಿಷತ್ ಸದಸ್ಯ ಆರ್ ಶಂಕರ್ ಅವರು ದೇವರ ಹೆಸರಿನಲ್ಲಿ,  ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಕೂಡಾ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!