Monday, October 13, 2025

BIG NEWS | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ಸ್ಪೀಕರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಡದ ಸಭೆ ನಡೆಯಿತು.

ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕರಾವಳಿ ಜಿಲ್ಲೆಗಳ ವಿವಿಧ ಕ್ಷೇತ್ರಗಳ ಎಲ್ಲ ಪಕ್ಷಗಳ ಶಾಸಕರು, ಉನ್ಮತ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಸಮಯ ಮಿತಿಯೊಳಗೆ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಿ ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌ ಜಿಲ್ಲೆಯ ಕಟ್ಟಡ ಕಾಮಗಾರಿಗಳಿಗೆ, ಗೃಹ ನಿರ್ಮಾಣಕ್ಕೆ ಕೆಂಪುಕಲ್ಲು ಅಗತ್ಯವಾಗಿ ಬೇಕಾಗಿದೆ. ಕೆಂಪುಕಲ್ಲು ಗಣಿಗಾರಿಕೆ ಮಾಡುವವರು ಅರ್ಜಿ ಸಲ್ಲಿಸುವವರಿಗೆ ಶೀಘ್ರದಲ್ಲಿ ಅವಕಾಶ ಕಲ್ಪಿಸಿ, ತಿಂಗಳೊಳಗೆ ಪರವಾನಿಗಳು ದೊರಕಿಸಿಕೊಡುವತ್ತ ಹೆಚ್ಚಿನ ಗಮನ ಹರಿಸುವಂತೆ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರು, ಮಣ್ಣ ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಡ್ರಿಲ್ ಮಾಡುವ ಕುರಿತಂತೆ ಇರುವ ಸಮಸ್ಯೆಯನ್ನು ಸರಿಪಡಿಸುವತ್ತ ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.‌ ರಾಯಾಲ್ಟಿ ಕಡಿಮೆಗೊಳಿಸಿಗೆ ನಿಯಮ ಬದ್ಧವಾಗಿ ಕೆಂಪುಕಲ್ಲು ಗಣಿಗಾರಿಗೆಕೆ ಅವಕಾಶ ಕಲ್ಪಿಸುವಂತೆ ಗಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

error: Content is protected !!