BIG NEWS | ನಟ ಅಲ್ಲು ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಕೇಸ್​​ನಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದು, ಬಳಿಕ ಪೊಲೀಸಾರು ಅಲ್ಲು ಅರ್ಜುನ್​ ಅವರನ್ನು ಹೈದರಾಬಾದ್​​ ನಾಂಪಲ್ಲಿ ಕೋರ್ಟ್​​ನಲ್ಲಿ ಹಾಜರುಪಡಿಸಿದ್ದಾರೆ.

ಕೋರ್ಟ್​ ಈಗ ಮಹತ್ವದ ಆದೇಶ ಹೊರಡಿಸಿದ್ದು, 14 ದಿನಗಳ ಕಾಲ ಅಲ್ಲು ಅರ್ಜುನ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಕೋರ್ಟ್‌ ಆದೇಶದ ಬೆನ್ನಲ್ಲೇ ಅಲ್ಲು ಅರ್ಜುನ್‌ ಅವರನ್ನು ಚಂಚಲಗೂಡ ಜೈಲಿಗೆ ಶಿಫ್ಟ್‌ ಮಾಡಲಾಗುತ್ತದೆ.

ಡಿ. 4 ರಂದು ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒರ್ವ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!