Saturday, March 25, 2023

Latest Posts

BIG NEWS | ಮೋಸ್ಟ್ ವಾಂಟೆಡ್ ಉಗ್ರನ ತಲೆಗೆ 15 ಲಕ್ಷ ರೂ. ಬಹುಮಾನ ಘೋಷಿಸಿದ ಎನ್‌ಐಎ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಲೆಮರೆಸಿಕೊಂಡಿರುವ ಭಯೋತ್ಪಾದಕ ಆರೋಪಿ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾ ತಲೆಗೆ ಗುರುವಾರ 15 ಲಕ್ಷ ರೂಪಾಯಿ ನಗದು ಬಹುಮಾನ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಘೋಷಿಸಿದೆ.
ಪಂಜಾಬ್ ನ ತರ್ನ್ ತರನ್ ಜಿಲ್ಲೆಯ ಹರಿಕೆ ಗ್ರಾಮದ ನಿವಾಸಿಯಾಗಿರುವ ಲಾಂಡಾ ಪ್ರಸ್ತುತ ಕೆನಡಾದ ಆಲ್ಬರ್ಟಾದ ಎಡ್ಮಂಟನ್ನಲ್ಲಿ ನೆಲೆಸಿದ್ದಾನೆ.

ದೇಶದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಲಾಂಡಾ ವಿರುದ್ಧ ಎನ್ಐಎ ಕಳೆದ ವರ್ಷ ಆಗಸ್ಟ್ 20 ರಂದು ಐಪಿಸಿಯ ಸೆಕ್ಷನ್ 120ಬಿ, 121, 121ಎ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ 1967ರ ಸೆಕ್ಷನ್ 17, 18, 18-ಬಿ ಹಾಗೂ 38ರ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!