ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯಲ್ಲಿ ಗದ್ದಲ ಮಾಡಿದ್ದಾರೆ ಎಂದು ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.
ಇಂದು ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಕಲಾಪ ಆರಂಭಗೊಳ್ಳುತ್ತಿದ್ದಂತೆ ಮುಸ್ಲೀಂ ಮೀಸಲಾತಿ ಮಸೂದೆ ಸೇರಿದಂತೆ ವಿವಿಧ ಮಸೂದೆ ವಿರೋಧಿಸಿ ಬಿಜೆಪಿಯ ಶಾಸಕರು ಪ್ರತಿಭಟನೆ, ಗದ್ದಲ ಕೋಲಾಹಲವನ್ನು ಉಂಟು ಮಾಡಿದರು.
ಈ ಹಿನ್ನಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಸ್ಪೀಕರ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಬಿಜೆಪಿಯ ದೊಡ್ಡಮಗೌಡ ಪಾಟೀಲ್, ಅಶ್ವತ್ಥನಾರಾಯಣ, ಭರತ್ ಶೆಟ್ಟಿ, ಉಮಾನಾಥ ಕೊಟ್ಯಾನ್, ಬಿಪಿ ಹರೀಶ್, ಧೀರಜ್ ಮುನಿರಾಜ್, ಶರಣು ಸಲಗರ, ಬಿ ಸುರೇಶ್ ಗೌಡ, ಮುನಿರತ್ನ, ಚನ್ನಬಸವ ಸೇರಿದಂತೆ 18 ಬಿಜೆಪಿ ಶಾಸಕರನ್ನು ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.