BIG NEWS | 62 ತಾಲೂಕುಗಳು ಬರಪೀಡಿತ: ರಾಜ್ಯ ಸರಕಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ 62 ತಾಲೂಕುಗಳು ಬರಪೀಡಿತ ಎಂದು ಸಚಿವ ಕೃಷ್ಣಭೈರೇಗೌಡ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ 113 ತಾಲೂಕುಗಳಲ್ಲಿ ಅಧ್ಯಯನ ಮಾಡಲಾಗಿದ್ದು, 62 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ.
51 ತಾಲೂಕುಗಳಲ್ಲಿ ಮತ್ತೆ ಅಧ್ಯಯನ ಮಾಡಲಾಗುತ್ತದೆ. ಈ ಬಾರಿ ವಾಡಿಕೆಗಿಂತ ಶೇ. 26 ರಷ್ಟು ಮಳೆ ಕಡಿಮೆ ಆಗಿದೆ . ಅದೇ ರೀತಿ ಹೆಚ್ಚುವರಿ 83 ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ಬರ ಕಾಡುತ್ತಿದೆ. ಈ ಹಿನ್ನೆಲೆ ರಾಜ್ಯದ ಹಲವು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಆಗಸ್ಟ್ ನಲ್ಲಿ ಉತ್ತಮ ಮಳೆಯಾಗುತ್ತೆ ಎಂದು ರೈತರು ನಂಬಿಕುಳಿತಿದ್ದರು. ಆದ್ರೆ ಮಳೆ ಅಭಾವದಿಂದ ರಾಜ್ಯದ ರೈತರು ಕಂಗಾಲಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!