ಹೊಸದಿಗಂತ ಡಿಜಿಟಲ್ ಡೆಸ್ಕ್ :
ದೆಹಲಿ-ಪುಣೆ ನಡುವೆ ಸಂಚರಿಸುವ ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ವಿಮಾನ ಟೇಕಾಫ್ ಆಗುವುದಕ್ಕೂ ಮೊದಲು ಬೆದರಿಕೆ ಕರೆ ಬಂದಿದ್ದು, ಕೂಡಲೇ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ವಿಮಾನವನ್ನು ಪರಿಶೀಲಿಸಿದ್ದಾರೆ.
ಆದ್ರೆ, ಸ್ಫೋಟಕ ಪತ್ತೆಯಾಗಿಲ್ಲದಿರುವುದರಿಂದ ಇದೊಂದು ಹುಸಿ ಬೆದರಿಕೆ ಕರೆ ಎಂದು ದೆಹಲಿ ಪೊಲೀಸರು ದೃಢಪಡಿಸಿದ್ದಾರೆ.