ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಐಷಾರಾಮಿ ಜೀವನ ಮಾಡುತ್ತಿದ್ದಾನೆ ಎಂಬುದಕ್ಕೆ ಮತ್ತಷ್ಟು ವಿಡಿಯೋ ಸಾಕ್ಷಿಗಳು ಲಭ್ಯವಾಗಿವೆ. ಜೈಲಿನಲ್ಲಿದ್ದರೂ ಮೊಬೈಲ್‌ನ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಈಗಾಗಲೇ ನಟ ದರ್ಶನ್ ಜೈಲಿನಲ್ಲಿ ನಟೋರಿಯಸ್ ರೌಡಿ ವಿಲ್ಸನ್ ಗಾರ್ಡನ್ ನಾಗನೊಂದಿಗೆ ಕುಳಿತು ಕಾಫಿ ಹೀರುತ್ತಾ, ಕೈಯಲ್ಲಿ ಸಿಗರೇಟ್ ಹಿಡಿದು ಸೇದುತ್ತಿರುವ ಫೋಟೋ ವೈರಲ್ ಆಗಿತ್ತು.
ಈಗ ಮತ್ತೊಂದು ವಿಡಿಯೋ ಲಭ್ಯವಾಗಿದೆ. ಜೈಲಿನಲ್ಲಿ ಮೊಬೈಲ್, ಫೋನ್ ಯಾವುದನ್ನೂ ಬಳಸಲು ಅವಕಾಶ ಇಲ್ಲದಿದ್ದರೂ ಜೈಲಿನಲ್ಲಿದ್ದುಕೊಂಡೇ ಮೊಬೈಲ್‌ನಲ್ಲಿ ವಿಡಿಯೋ ಕಾಲ್ ಮೂಲಕ ಹೊರಗಿನವರೊಂದಿಗೆ ಮಾತನಾಡಿದ್ದಾರೆ. ದರ್ಶನ್ ಜೈಲಿನಲ್ಲಿದ್ದುಕೊಂಡೇ ಹೊರಗಿನವರ ಜೊತೆಗೆ ನಗು ನಗುತ್ತಾ ಮಾತನಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ವಿಐಪಿ ಸೆಲ್‌ನಲ್ಲಿರುವ ನಟ ದರ್ಶನ್‌ಗೆ ಐಷಾರಾಮಿ ವ್ಯವಸ್ಥೆ ಲಭ್ಯವಾಗುತ್ತಿದೆ ಎಂಬುದಕ್ಕೆ ಇಂದಿನ ಫೋಟೋ ಮತ್ತು ವಿಡಿಯೋಗಳೇ ಸಾಕ್ಷಿಯಾಗಿವೆ.