Monday, November 28, 2022

Latest Posts

BIG NEWS | ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಇಸ್ಲಾಮಾಬಾದ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ಬಂಧನಡ ವಾರೆಂಟ್ ಹೊರಡಿಸಿದೆ.

ಶುಕ್ರವಾರ ( ಸೆಪ್ಟೆಂಬರ್ 30) ಇಮ್ರಾನ್ ಖಾನ್ ಇಸ್ಲಾಮಾಬಾದ್ ‌ ನ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಜೆಬಾ ಚೌಧರಿ ಅವರಿಗೆ ವೈಯಕ್ತಿಕವಾಗಿ ಕ್ಷಮೆಯಾಚಿಸಿದರು . ಸಾರ್ವಜನಿಕ ರ್ಯಾಲಿಯಲ್ಲಿ ಇಮ್ರಾನ್ ಖಾನ್ ಮಹಿಳಾ ನ್ಯಾಯಾಧೀಶೆ ಜೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದರು .

ಆಗಸ್ಟ್ 20 ರಂದು ಇಸ್ಲಾಮಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ, ಇಮ್ರಾನ್ ನನ್ನ ಸಹೋದ್ಯೋಗಿ ಶಹಬಾಜ್ಗಿಲ್ ಅವ್ರನ್ನ ನಡೆಸಿಕೊಂಡಿದ್ದಕ್ಕಾಗಿ ಉನ್ನತ ಪೊಲೀಸ್ ಅಧಿಕಾರಿಗಳು, ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!