ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ಇಂದು (ಮಂಗಳವಾರ) ರಾಜೀನಾಮೆ ನೀಡಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಮಂಗಳವಾರ ಸಂಜೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಭಾನುವಾರ, ಅರವಿಂದ್ ಕೇಜ್ರಿವಾಲ್ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ‘ಎರಡು ದಿನಗಳಲ್ಲಿ’ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದರು.
ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.