ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ.
ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಆದೇಶ ಹೊರಡಿಸಿದ್ದಾರೆ.
ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ತೆರೆ ಬಿದ್ದಂತಾಗಿದೆ.