BIG NEWS | ಬಲೂಚಿಸ್ತಾನ್ ದ ರೈಲ್ವೆ ಹಳಿಯಲ್ಲಿ ಬಾಂಬ್ ಸ್ಫೋಟ: ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ರೈಲ್ವೆ ಹಳಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪೇಶಾವರಕ್ಕೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಪನೀರ್ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ.ಎಂಟು ಜನರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಕಿಸ್ತಾನ ರೈಲ್ವೇ ವಕ್ತಾರರ ಪ್ರಕಾರ ಮಾಹಿತಿ ನೀಡಿದ್ದಾರೆ.

ಇತ್ತ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. , ಇದು ರಿಮೋಟ್ ನಿಯಂತ್ರಿತ ಸ್ಫೋಟವಾಗಿದ್ದು, ರೈಲಿನ ಹಲವು ಬೋಗಿಗಳನ್ನು ಹಳಿತಪ್ಪಿಸಿದೆ ಎಂದು ಡೆಪ್ಯುಟಿ ಕಮಿಷನರ್ ಕಚ್ ಅಘಾ ಸಮೀವುಲ್ಲಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!