ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ನಟ ಉಪೇಂದ್ರ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಉಪ್ಪಿ ವಿರುದ್ಧ ಜಾತಿ ನಿಂದನೆ ಆರೋಪದಡಿ ಪೊಲೀಸರು ದಾಖಲಿಸಿಕೊಂಡಿದ್ದ ಎಫ್ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯನ್ನು ನೀಡಿದೆ.
ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪೇಂದ್ರ ಅವರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ ಐಆರ್ ಗೆ ತಡೆ ನೀಡಿ ಆದೇಶ ಹೊರಡಿಸಿದೆ.