ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ, ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿದೆ .
ಇಂದು ಹೈಕೋರ್ಟ್‌ನಲ್ಲಿ ಇಂದು ಸಿಟಿ ರವಿ ಕೇಸ್‌ನಲ್ಲಿ ತೀವ್ರ ವಾದ ಪ್ರತಿವಾದ ನಡೆಯಿತು. ಸಿಟಿ ರವಿ ಮೇಲಿನ ಎಫ್‌ಐಆರ್ ತಡೆಗೆ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಸ್ಟಿಸ್ ಎಂ ಜಿ ಉಮಾ ಪೀಠದ ಮುಂದೆ ಅರ್ಜಿ ವಿಚಾರಣೆ ನಡೆಯಿತು. ಸುದೀರ್ಘ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಸಿಟಿ ರವಿ ಬಿಡುಗಡೆಗೆ ಆದೇಶ ನೀಡಿದೆ. ಎಲ್ಲಿದ್ದಾರೋ ಅಲ್ಲೇ ರಿಲೀಸ್ ಮಾಡಿ ಅಂತ ಹೈಕೋರ್ಟ್ ಆದೇಶಿಸಿದೆ.
ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಸಿ.ಟಿ. ರವಿ ಅವರ ಪರವಾಗಿ ವಾದ ಮಂಡಿಸಿದ ವಕೀಲರು, ಆರೋಪಿಗಳಿಗೆ 7 ವರ್ಷಕ್ಕಿಂದ ಕಡಿಮೆ ಶಿಕ್ಷೆ ಇರುವ ಪ್ರಕರಣದಲ್ಲಿ 41a ನೋಟಿಸ್ ನೀಡಬೇಕಿತ್ತು. ಪೊಲೀಸರು ಬಂಧನಕ್ಕೆಕಾರಣ ನೀಡಬೇಕಿತ್ತು. ಆದರೆ, ಅದನ್ನು ನೀಡಿರುವ ಬಗ್ಗೆ ದಾಖಲೆಗಳು ಇಲ್ಲ. ಪೊಲೀಸರು ಹಲ್ಲೆ ನಡೆಸಿದ್ದರಿಂದ ಗಾಯ ಆಗಿದೆ ಎಂದು ಸಿಟಿ ರವಿ ವಕೀಲರು ಹೇಳಿದ್ದಾರೆ. ಇನ್ನು ಸಿ.ಟಿ. ರವಿ ಅವರಿಗೆ ಚಿಕಿತ್ಸೆ ನೀಡಿದ ವಿವರವನ್ನ ವೈದ್ಯಾಧಿಕಾರಿ ಸರಿಯಾಗಿ ನಮೂದಿಸಿಲ್ಲ. ಕೇವಲ ಸ್ಕ್ಯಾನಿಂಗ್ ಮಾಡಿಸಿರುವ ಬಗ್ಗೆ ವರದಿ ಇದೆ ಎಂದು ಕೋರ್ಟ್ ಮುಂದೆ ತಿಳಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಷತ್ ಸಭಾಂಗಣದಲ್ಲಿ ನಡೆದ ಏನನ್ನೂ ರೆಕಾರ್ಡ್ ಮಾಡಿಲ್ಲ ಎಂದು ಹೇಳಿದ್ದಾರೆ. ಈ ಘಟನೆ ನಡೆಸಿರುವುದು ದುರದೃಷ್ಟಕರ. ಆರೋಪಿ ರವಿ ಬಂಧಿಸಲು ಹಲ್ಲೆ ಮಾಡುವ ಅಗತ್ಯ ಇರಲಿಲ್ಲ. ಕಾನೂನು ಪಾಲಿಸಿ ಕ್ರಮಕೈಗೊಳ್ಳಬಹುದಿತ್ತು ಎಂದು ವಾದ ಮಂಡಿಸಿದರು.
ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠದಿಂದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ. ಮುಂದುವರೆದು, ಈ ಘಟನೆಯ ಪೊಲೀಸರ ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಲಾಗಿದೆ.
ಅತ್ತ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ವಿಚಾರಣೆ ಮುಂದೂಡಿಕೆ
ಮತ್ತೊಂದೆಡೆ ಸಿಟಿ ರವಿ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೂ ಕೂಡ ನಡೆಯಿತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಅನ್ವಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. ಪ್ರಕರಣದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ಅರ್ಜಿ ವಿಚಾರಣೆಯನ್ನು ನಾಳೆಗೆ (ಡಿಸೆಂಬರ್ 21) ಮುಂದೂಡಿತ್ತು.