BIG NEWS | ಟಿ20 ವಿಶ್ವಕಪ್ ಗೆ ಸಜ್ಜಾಗುತ್ತಿರುವ ಟೀಮ್ ಇಂಡಿಯಾಕ್ಕೆ ಬಿಗ್ ಶಾಕ್: ಜಸ್ಪ್ರೀತ್ ಬುಮ್ರಾ ಔಟ್ ಎಂದ ಬಿಸಿಸಿಐ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ ಬಿದಿದ್ದು, ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ.
ಈ ಕುರಿತು ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಬೆನ್ನುಮೂಳೆ ಮುರಿತದಿಂದ ಸೌತ್ ಆಫ್ರಿಕಾ ಟೂರ್ನಿಯಿಂದ ಹೊರಬಿದ್ದ ವೇಗಿ ಜಸ್ಪ್ರೀತ್ ಬುಮ್ರಾ, ಟಿ20 ವಿಶ್ವಕಪ್ ಟೂರ್ನಿಗೆ ಲಭ್ಯತೆ ಕುರಿತು ಮಾಹಿತಿ ನೀಡಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಅಭ್ಯಾಸದ ವೇಳೆ ಜಸ್ಪ್ರೀತ್ ಬುಮ್ರಾಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ತಿರುವನಂತಪುರಂಲ್ಲಿ ಸ್ಕ್ಯಾನಿಂಗ್ ಒಳಗಾದ ಬೆನ್ನು ಮೂಳೆ ಮುರಿತಕ್ಕೊಳಗಾಗಿದೆ ವರದಿ ಟೀಮ್ ಇಂಡಿಯಾಕ್ಕೆ ಶಾಕ್ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!