spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BIG NEWS | ಬೆಂಗಳೂರಿನಲ್ಲಿ ಬೈಕ್-ಕಾರು ನಡುವೆ ಭೀಕರ ಅಪಘಾತ: ಫ್ಲೈಓವರ್ ನಿಂದ ಬಿದ್ದು ಯುವಕ-ಯುವತಿ ಸಾವು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಫ್ಲೈಓವರ್ ನಿಂದ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು ಯುವಕ-ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓವರ್ ಟೇಕ್ ಮಾಡುವ ರಭಸದಲ್ಲಿ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಯುವತಿಯರು ಫ್ಲೈಓವರ್ ನಿಂದ ಕೆಳಗೆ ಬಿದ್ದಿದ್ದಾರೆ.
ಇನ್ನು ಅಪಘಾತದಲ್ಲಿ ಕಾರು ಸಹ ಜಖಂಗೊಂಡಿದ್ದು ಫೈಓವರ್ ನ ತುದಿಗೆ ಬಂದು ನಿಂತಿದೆ. ಇನ್ನು ಸ್ವಲ್ಪ ವಾಲಿದ್ದರೂ ಕಾರು ಸಹ ಫ್ಲೈಓವರ್ ಮೇಲಿನಿಂದ ಕೆಳಗೆ ಬೀಳುವ ಸಂಭವವಿತ್ತು. ಸ್ಥಳಕ್ಕೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ . ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss