BIG NEWS | ಬಿಜೆಪಿ ನಾಯಕ ಅಣ್ಣಾಮಲೈ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

1998ರ ಫೆಬ್ರವರಿಯಲ್ಲಿ ಕೊಯಮತ್ತೂರಿನಲ್ಲಿ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ನಿಷೇಧಿತ ಅಲ್ ಉಮ್ಮಾ ಸಂಘಟನೆಯ ಮುಖ್ಯಸ್ಥ ಎಸ್.ಎ.ಬಾಷಾ ಅಂತ್ಯಕ್ರಿಯೆಗೆ ಪೊಲೀಸರು ಅನುಮತಿ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಕೊಯಮತ್ತೂರು ಗಾಂಧಿಪುರಂ ಬಸ್ ನಿಲ್ದಾಣದ ಬಳಿ ಬಿಜೆಪಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಅಣ್ಣಾಮಲೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

1998ರ ಫೆಬ್ರವರಿಯಲ್ಲಿ ಕೊಯಮತ್ತೂರಿನಲ್ಲಿ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿಯಾಗಿದ್ಧ ಎಸ್.ಎ.ಬಾಷಾಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. 30 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದರು.

Image

ಆದ್ರೆ ಇತ್ತೀಚೆಗೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಬಾಷಾಗೆ ಮದ್ರಾಸ್ ಹೈಕೋರ್ಟ್ ಆದೇಶದ ಮೇರೆಗೆ ಜಾಮೀನು ನೀಡಿತ್ತು.

ಆದರೆ ಆರೋಗ್ಯ ಹದಗೆಟ್ಟ ಕಾರಣ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ನಿಧನರಾದರು.

ಇತ್ತ ಬಾಷಾ ಮೃತದೇಹವನ್ನು ಆ್ಯಂಬುಲೆನ್ಸ್ ನಲ್ಲಿ ಮೆರವಣಿಗೆಯೊಂದಿಗೆ ದಕ್ಷಿಣ ಉಕ್ಕಡಂನಿಂದ ಹೈದರ್‌ ಅಲಿ ಟಿಪ್ಪು ಸುಲ್ತಾನ್‌ ಸುನ್ನತ್‌ ಜಮಾತ್‌ ಮಸೀದಿವರೆಗೆ ಮೆರವಣಿಗೆ ತೆಗೆದುಕೊಂಡು ಬಂದು ಅಂತ್ಯಸಂಸ್ಕಾರ ನೆರವೇರಿಸಿದ್ದರು.

ಇದೀಗ ಅಂತ್ಯಕ್ರಿಯೆಗೆ ಪೊಲೀಸರು ಅನುಮತಿ ನೀಡಿದ್ದಕ್ಕೆ ತಮಿಳುನಾಡು ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪೊಲೀಸರ ವಿರುದ್ಧ ಕೊಯಮತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

Imageಕೊಯಮತ್ತೂರು ಗಾಂಧಿಪುರಂ ಬಸ್ ನಿಲ್ದಾಣದ ಬಳಿ ಸಾವಿರಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಹಿಂದು ಮುನ್ನಣಿ ಮುಖ್ಯಸ್ಥ ಕಾಡೇಶ್ವರ ಸುಬ್ರಮಣಿಯಂ ಸೇರಿದಂತೆ ಹಲವರು ಭಾಗವಹಿಸಿದ್ದರು.

ಆದ್ರೆ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಕಾರಣ ಅಣ್ಣಾಮಲೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!