ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಹಿರಿಯ ನಾಯಕ ಎಸ್. ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ.
ಜ್ವರದಿಂದ ಬಳಲುತ್ತಿದ್ದ ಸುರೇಶ್ ಕುಮಾರ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸುರೇಶ್ ಕುಮಾರ್ ಅವರ ಮೆದುಳಿಗೂ ಜ್ವರ ತಗುಲಿರುವ ಕಾರಣ ICUನಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.