October 15, 2026
Thursday, October 15, 2026
spot_img

BIG NEWS | ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ ನೂತನ ಮುಖ್ಯಮಂತ್ರಿ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರು ಆಯ್ಕೆಯಾಗಿದ್ದಾರೆ.

ಪಾಟ್ನಾದ ಲೋಕಭವನದಲ್ಲಿ ನಿತೀಶ್ ಕುಮಾರ್ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಬಿಹಾರದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಲಿದೆ.

ನಾಳೆ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

57 ವರ್ಷದ ಚೌಧರಿ ಅವರು ರಾಜ್ಯದ ಪ್ರಮುಖ ಒಬಿಸಿ ಸಮುದಾಯವಾದ ಕೊಯೇರಿ ಅಥವಾ ಕುಶ್ವಾಹ ಜಾತಿಗೆ ಸೇರಿದವರಾಗಿದ್ದು, ಪ್ರಮುಖ ಬಿಜೆಪಿ ನಾಯಕನಾಗಿ ಗುರುತಿಸಿಕೊಂಡಿದ್ದರು.

ನಾಳೆ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

Must Read