Friday, October 7, 2022

Latest Posts

BIG NEWS | ಮುಂಬೈ ನ ರಾಯಗಢದಲ್ಲಿ ಶಸ್ತ್ರಾಸ್ತ್ರ ತುಂಬಿದ್ದ ಬೋಟ್‌ ಪತ್ತೆ: ಹೈ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬೈನ ರಾಯಗಢ ಜಿಲ್ಲೆಯ ಶ್ರೀವರ್ಧನ್ ಎಂಬಲ್ಲಿ ಅನುಮಾನಾಸ್ಪದವಾಗಿ ಬೋಟ್ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಈ ದೋಣಿಯಲ್ಲಿ ಎಕೆ-47 ರೈಫಲ್‌ಗಳು ಪತ್ತೆಯಾಗಿವೆ. ಭದ್ರತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಪೊಲೀಸರು ದಿಗ್ಬಂಧನ ವಿಧಿಸಿದ್ದಾರೆ.

ಇದಲ್ಲದೇ ಹರಿಹರೇಶ್ವರದಲ್ಲಿ ಚಿಕ್ಕ ದೋಣಿಯೊಂದು ಪತ್ತೆಯಾಗಿದ್ದು, ಅದರಲ್ಲಿ ಲೈಫ್ ಜಾಕೆಟ್ ಹಾಗೂ ಕೆಲವು ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಈ ಘಟನೆ ಸಂಚಲನ ಮೂಡಿಸಿದ್ದು, ಜಿಲ್ಲೆಯಾದ್ಯಂತ ಪೊಲೀಸರು ದಿಗ್ಬಂಧನ ವಿಧಿಸಿದ್ದಾರೆ.

ವರದಿಗಳ ಪ್ರಕಾರ, ಶ್ರೀವರ್ಧನ್‌ನ ಹರಿಹರೇಶ್ವರ ಮತ್ತು ಭಾರದ್‌ಖೋಲ್‌ನಲ್ಲಿ ದೋಣಿಗಳು ಪತ್ತೆಯಾಗಿವೆ. ಹರಿಹರೇಶ್ವರದ ದೋಣಿಯಲ್ಲಿ ಎರಡು-ಮೂರು ಎಕೆ-47 ರೈಫಲ್ ಮತ್ತು ಬುಲೆಟ್‌ಗಳು ಪತ್ತೆಯಾಗಿವೆ. ಎರಡೂ ದೋಣಿಗಳ ಬಳಿ ಯಾರೂ ಕೂಡ ಪತ್ತೆಯಾಗಿಲ್ಲ.

ಇದರ ನಡುವೆ ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳದ ಮುಖ್ಯಸ್ಥ ಮಾತನಾಡಿದ್ದು, ರಾಜ್ಯದಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿತ್ತು. ತೀವ್ರ ರೂಪದಲ್ಲಿ ತನಿಖೆ ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗುತ್ತಿದ್ದಂತೆ ಕಾರ್ಯಪ್ರವೃತ್ತವಾಗಿರುವ ಸ್ಥಳೀಯ ಪೊಲೀಸ್‌, ಸಮೀಪದ ಜನರು ಹಾಗೂ ಮೀನುಗಾರರನ್ನು ವಿಚಾರಣೆ ಮಾಡುತ್ತಿದ್ದು, ಮಾಹಿತಿ ಕಲೆಹಾಕುವ ಕೆಲಸ ಮಾಡುತ್ತಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!