BIG NEWS | ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan)​ ಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ.

ಕೆಲವು ದಿನ ಹಿಂದೆ ಸಲ್ಮಾನ್ ಖಾನ್ ಅನ್ನು ಕೊಂದೇ ಕೊಲ್ಲುತ್ತೇನೆ ಎಂದು ಪಾತಕಿ ಲಾರೆನ್ಸ್ ಬಿಷ್ಣೋಯಿ ಹಲವು ವರ್ಷಗಳಿಂದ ಹೇಳುತ್ತಲೇ ಬರುತ್ತಿದ್ದಾರೆ. ಕೆಲವು ದಿನ ಮುಂಚೆ ಸಹ ಸಲ್ಮಾನ್ ಖಾನ್ ಅನ್ನು ಕೊಲ್ಲವುದೇ ನನ್ನ ಜೀವನದ ಅಂತಿಮ ಗುರಿ ಎಂದು ಹೇಳಿದ್ದಾನೆ.

ಇದೀಗ ಸಲ್ಮಾನ್ ಖಾನ್​ಗೆ ಮತ್ತೊಂದು ಬೆದರಿಕೆ ಬಂದಿದ್ದು ಈ ಬಾರಿ ಇ-ಮೇಲ್ ಮೂಲಕ ಈ ಬೆದರಿಕೆ ಬಂದಿದೆ.

ಸಲ್ಮಾನ್ ಖಾನ್​ರ ಆತ್ಮೀಯ ಗೆಳೆಯ ಹಾಗೂ ಮ್ಯಾನೇಜರ್ ಆಗಿರುವ ಪ್ರಶಾಂತ್ ಗುಂಜಲ್ಕರ್ ಅವರಿಗೆ ಬೆದರಿಕೆ ಇ-ಮೇಲ್ ಬಂದಿದ್ದು, ಈ ಬೆದರಿಕೆ ಇ-ಮೇಲ್ ಅನ್ನು ಪಾತಕಿ ಗೋಲ್ಡಿ ಬ್ರಾರ್​ನ ಆಪ್ತ ಮೋಹಿತ್ ಗರ್ಗ್ ಕಳಿಸಿದ್ದಾನೆ ಎನ್ನಲಾಗಿದೆ. ಬೆದರಿಕೆ ಇಮೇಲ್ ಬಂದಿರುವ ಬಗ್ಗೆ ಪ್ರಶಾಂತ್ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶನಿವಾರ ಮಧ್ಯಾಹ್ನ ಇಮೇಲ್ ಬಂದಿದ್ದು, ”ಗೋಲ್ಡಿ ಅಣ್ಣ (ಗೋಲ್ಡಿ ಬ್ರಾರ್) ನಿನ್ನ ಬಾಸ್​ (ಸಲ್ಮಾನ್ ಖಾನ್) ಜೊತೆ ಮಾತನಾಡಬೇಕಂತೆ. ಲಾರೆನ್ಸ್ ನ ಸಂದರ್ಶನ ನೋಡಿಯೇ ಇರಬೇಕು ಅವನು. ಸಂದರ್ಶನ ನೋಡಿಲ್ಲ ಎಂದಾದರೆ ತೋರಿಸು ಅವನಿಗೆ. ಈ ವಿಷಯ ಇಲ್ಲಿಗೆ ಮುಗಿಸಬೇಕು ಎಂದರೆ ಗೋಲ್ಡಿ ಅಣ್ಣನ ಜೊತೆ ಮಾತನಾಡಲು ಹೇಳು. ಅದೂ ನೇರಾ-ನೇರಾ. ಈಗಿನ್ನೂ ಸಮಯ ಇದೆ ಅದಕ್ಕೆ ಹೇಳುತ್ತಿದ್ದೇನೆ. ಇಲ್ಲವಾದರೆ ಹೊಡೆಯುತ್ತೇವೆ ಅಷ್ಟೆ” ಎಂದು ಮೇಲ್​ನಲ್ಲಿ ಬರೆಯಲಾಗಿದೆ. ಮೇಲ್ ಮೋಹಿತ್ ಗರ್ಗ್ ಎಂಬಾತನ ಖಾತೆಯ ಮೂಲಕ ಬಂದಿದೆ.

ಸಲ್ಮಾನ್ ಖಾನ್ ಅವರ ಮ್ಯಾನೇಜರ್ ಪ್ರಶಾಂತ್ ಗುಂಜಾಲ್ಕರ್ ಅವರ ದೂರಿನ ಮೇರೆಗೆ ಮುಂಬೈ ಪೊಲೀಸರು ಭಾನುವಾರ (ಮಾರ್ಚ್ 19) ದರೋಡೆಕೋರರಾದ ​​ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯ್ ವಿರುದ್ಧ ಐಪಿಸಿ ಸೆಕ್ಷನ್ 120 (ಬಿ), 34 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!