Saturday, August 13, 2022

Latest Posts

BIG NEWS | ಪ್ರಧಾನಿ ಹುದ್ದೆಗೆ ಗುಡ್ ಬೈ ಹೇಳಿದ ಬೋರಿಸ್ ಜಾನ್ಸನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬ್ರಿಟನ್​ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಭ್ರಷ್ಟಾಚಾರ ಪ್ರಕರಣ ಹಾಗೂ ಸ್ವಪಕ್ಷೀಯ ಸಚಿವರಿಂದ ತೀವ್ರ ವಿರೋಧಕ್ಕೊಳಗಾಗಿದ್ದ ಬೋರಿಸ್ ಇದೀಗ ಪ್ರಧಾನಿ ಹುದ್ದೆಯಿಂದ ಕೆಳಗಿಳಿದಿದ್ದಾರೆ.
ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿರುವ ಬೋರಿಸ್​, ಈ ನಿರ್ಧಾರ ಪ್ರಕಟಿಸಿದ್ದು, ಮುಂದಿನ ಹೊಸ ನಾಯಕನಿಗೆ ಸಂಪೂರ್ಣವಾಗಿ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಪ್ರಧಾನಿಯಾಗಿ ನಾನು ಯಶಸ್ಸು ಕಾಣಲಿಲ್ಲ ಎಂಬ ಕೊರಗು ನನ್ನಲ್ಲಿದ್ದು, ನನಗೆ ಸಹಕಾರ ನೀಡಿರುವ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಬ್ರಿಟನ್​​ ಹಣಕಾಸು ಸಚಿವ ರಿಷಿ ಸುನಾಕ್​​ ಮತ್ತು ಆರೋಗ್ಯ ಖಾತೆ ಕಾರ್ಯದರ್ಶಿ ಸಾಜಿದ್​ ಜಾವಿದ್​ ಸೇರಿದಂತೆ ಕನ್ಸರ್ವೇಟಿವ್​ ಪಕ್ಷದ 8 ಸಚಿವರು ಹಾಗೂ ಸಂಸದರು ರಾಜೀನಾಮೆ ನೀಡಿದ್ದರು. ಹೀಗಾಗಿ, ಬ್ರಿಟನ್​​ನಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿತ್ತು. ಇದರ ಬೆನ್ನಲ್ಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss