ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಕೆಯ ಮುಂದಿನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. 185ಕ್ಕೂ ಹೆಚ್ಚು ಸಂಸದರು ರಿಷಿ ಸುನಕ್ ಪರವಾಗಿದ್ದು,ಈ ಮೂಲಕ ಗೆಲುವು ಗೆಲುವು ಸಾಧಿಸಿದ್ದಾರೆ.
ಇಂದು ನಡೆದ ಬ್ರಿಟನ್ ಪ್ರಧಾನಿ ಆಯ್ಕೆಯಲ್ಲಿ ಕನ್ಸರ್ವೇಟೀವ್ ಪಕ್ಷದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ.
ಲಿಜ್ ಟ್ರಸ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮುಂದಿನ ಪ್ರಧಾನಿ ಯಾರು ಅನ್ನೋ ಚರ್ಚೆ ವಿಶ್ವದಲ್ಲೇ ಶುರುವಾಗಿತ್ತು. ಇದೀಗ ಇನ್ಪೋಸಿಸ್ ನಾರಾಯಣ ಮೂರ್ತಿ ಅಳಿಯ, ಭಾರತೀಯ ಮೂಲದ ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.