ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಉತ್ತರ ಪ್ರದೇಶದ ಲಖನೌನಲ್ಲಿ ಭಯೋತ್ಪಾದಕ ನಿಗ್ರಹ ದಳ(ATS) ಬರೋಬ್ಬರಿ 8 ದಿನಗಳ ಕಾಲ ಕಾರ್ಯಾಚರಣೆ ನಡೆಸಿ, ಭಾರೀ ದುರಂತವೊಂದನ್ನ ತಡೆದಿದ್ದಾರೆ. ಭಯೋತ್ಪಾದಕರ ಗುಂಪೊಂದು ಬಾಂಬ್ ಸ್ಫೋಟಿಸಲು ತಯಾರಿ ನಡೆಸಿತ್ತು ಎನ್ನಲಾಗಿದ್ದು, ಈ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಟಿಎಸ್ ಟೀಮ್ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ಲಖನೌನ ಕಕೋರಿ ಬಳಿ ಇಬ್ಬರು ಶಂಕಿತರನ್ನ ಬಂಧಿಸಲಾಗಿದ್ದು ,ಎರಡು ಕುಕ್ವೇರ್ ಬಾಂಬ್ಗಳನ್ನ ವಶಪಡಿಸಿಕೊಂಡಿದ್ದಾರೆ. ಜಮ್ಮು ಕಾಶ್ಮೀರದಿಂದ ಕೃತ್ಯದ ಬಗ್ಗೆ ಗಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರ ಹಿನ್ನೆಲೆ ಯುಪಿ ಎಟಿಎಸ್ ಅಧಿಕಾರಿಗಳಿಗೆ ಪ್ರಕರಣ ಭೇದಿಸಲು ಸಾಧ್ಯವಾಗಿದ್ದು. ಶಂಕಿತರು ರಾಜಕಾರಣಿಗಳನ್ನ ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟಿಸಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ.
ಬಂಧನಕ್ಕೊಳಗಾಗಿರುವ ಉಗ್ರರು ಬಾರ್ಡರ್ನ ಕೆಲವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಶಂಕಿತ ಉಗ್ರರು ಅಡಗಿದ್ದರು ಎನ್ನಲಾದ ಸ್ಥಳಕ್ಕೆ ಎಟಿಎಸ್ ಕಮಾಂಡೋಗಳು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.