ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಸಾವು ಸೆಳೆದುಕೊಂಡಿದೆ.
ತಿಹಾರ್ ಜೈಲಿನಲ್ಲಿದ್ದಾಗ ಛೋಟಾ ರಾಜನ್ ಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ನನ್ನು ಏಪ್ರಿಲ್ 26ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
2015ರಲ್ಲಿ ಇಂಡೋನೇಷ್ಯಾದಿಂದ ಬಂಧನಕ್ಕೊಳಗಾದ ನಂತ್ರ ಆತನನ್ನು ನವದೆಹಲಿಯ ಉನ್ನತ ಭದ್ರತೆಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.