BIG NEWS | ದೇಶದಲ್ಲಿ ಕೊರೋನಾ ಸಬ್‌ವೇರಿಯಂಟ್ ಪತ್ತೆ: ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಚೀನಾ ಸಹಿತ ವಿದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ನ ರ್ಯಾಂಡಮ್ ಪರೀಕ್ಷೆಗೆ ಸೂಚನೆ ನೀಡಲಾಗಿದೆ.

ವಿಶ್ವದ ಕೆಲವು ಭಾಗಗಳಲ್ಲಿ ಇತ್ತೀಚಿನ ಪ್ರಕರಣಗಳ ಉಲ್ಬಣ ಗಮನದಲ್ಲಿಟ್ಟುಕೊಂಡು ಅಂತಾರರಾಷ್ಟ್ರೀಯ ಪ್ರಯಾಣಿಕರಿಗೆ ರ್ಯಾಂಡಮ್ ಮಾದರಿ ಪರೀಕ್ಷೆಯನ್ನು ವಿಮಾನ ನಿಲ್ದಾಣಗಳಲ್ಲಿ ನಡೆಸಲಾಗುವುದು ಎಂದು ಹೇಳಲಾಗಿದೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಪ್ರಸುತ್ತ ದೇಶದಲ್ಲಿ ಒಮಿಕ್ರಾನ್ ಸಬ್‌ವೇರಿಯಂಟ್ BF.7 ನ ಮೂರು ಪ್ರಕರಣಗಳು ಪತ್ತೆಯಾಗಿದೆ. ಎಲ್ಲರಿಗೂ ಎಚ್ಚರಿಕೆ ವಹಿಸುವಂತೆ ಮತ್ತು ಕಣ್ಗಾವಲು ಬಲಪಡಿಸಲು ನಾನು ನಿರ್ದೇಶನ ನೀಡಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸಿದ್ಧರಿದ್ದೇವೆ ಎಂದು ಮಾಂಡವಿಯಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!