Sunday, April 11, 2021

Latest Posts

BIG NEWS | ದಕ್ಸಿಣ ಕನ್ನಡ ಸಹಿತ ರಾಜ್ಯದ 9 ಜಿಲ್ಲೆಗಳಲ್ಲಿ ‘ಕೊರೋನಾ ಕರ್ಪ್ಯೂ’ ಜಾರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸ್ಫೋಟ ಮುಂದುವರೆದಿದ್ದು, ಈ ಹಿನ್ನೆಲೆ ಬೆಂಗಳೂರು, ದಕ್ಸಿಣ ಕನ್ನಡ ಸೇರಿದಂತೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶನಿವಾರದಿಂದ 10 ದಿನಗಳ ಕಾಲ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ.
ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ಬೆಂಗಳೂರು ನಗರ, ಉಡುಪಿ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್ , ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇದೇ ಶನಿವಾರದಿಂದ ನೈಟ್ ಕರ್ಪ್ಯೂ ಜಾರಿಗೊಳಿಸಿ ಸಿಎಂ ಆದೇಶ ಹೊರಡಿಸಿದ್ದಾರೆ.
ಪಿಎಂ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸಿದ ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ರು. ಈ ಸಂದರ್ಭದಲ್ಲಿ ರಾಜ್ಯಗಳ ರಾತ್ರಿ ನಿರ್ಬಂಧಕ್ಕೆ (ಕೊರೊನಾ ಕರ್ಫ್ಯೂ) ಪ್ರಧಾನಿ ಮೋದಿ ಬೆಂಬಲ ನೀಡಿದ್ದು, ರಾತ್ರಿ 9 ಗಂಟೆಗೆ ‘ಕೊರೊನಾ ಕರ್ಫ್ಯೂ’ ಪ್ರಾರಂಭವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು.
ಇದೀಗ ಕರ್ನಾಟಕದಲ್ಲಿ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ. ರಾಜ್ಯದ ಜನತೆ ನೈಟ್ ಕರ್ಪ್ಯೂ ವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಮನೆಯಿಂದ ಹೊರಗಡೆ ಬರಬಾರದು ಎಂದು ಸಿಎಂ ಕಟ್ಟು ನಿಟ್ಟಾಗಿ ಸೂಚನೆ ನೀಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss