Sunday, August 14, 2022

Latest Posts

BIG NEWS | 18 ವರ್ಷ ಮೇಲ್ಪಟ್ಟವರಿಗೆ ಸದ್ಯಕ್ಕಿಲ್ಲ ಕೊರೋನಾ ಲಸಿಕೆ: ರಾಜ್ಯ ಸರಕಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುವುದಿಲ್ಲ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲು ಆದ್ಯತೆ ನೀಡಲಾಗುತ್ತದೆ ಎಂಡಿ ರಾಜ್ಯ ಸರಕಾರ ಹೇಳಿದೆ.

ರಾಜ್ಯದ ಕೊವಿಡ್ ಪರಿಸ್ಥಿತಿ ಕುರಿತು ಕೊವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಹಲವು ಪ್ರಮುಖ ಸೂಚನೆಗಳನ್ನು ನೀಡಿದರು.

45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಲಸಿಕೆ ನೀಡಿ ಮುಗಿದ ಬಳಿಕವೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು. ಲಸಿಕೆಯ ಅಗತ್ಯ ಸಂಗ್ರಹ ಇರಿಸಿಕೊಂಡೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ದಿನಾಂಕ ಘೋಷಣೆ ಮಾಡಲಾಗುವುದು ಎಂಬ ನಿರ್ಣಯವನ್ನು ಸಭೆಯನ್ನು ಕೈಗೊಳ್ಳಲಾಯಿತು.

ಲಸಿಕೆ ಕೊರತೆ ಕಾರಣ ರಾಜ್ಯದಲ್ಲಿ ಲಸಿಕಾ ಕೇಂದ್ರಗಳಿಗೆ ಜನ ಮುಗಿಬೀಳುತ್ತಿದ್ದಾರೆ. 45 ವರ್ಷ ಮೇಲ್ಪಟ್ಟವರು ಸೇರಿದಂತೆ ಇನ್ನೂ ಅನೇಕರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿಲ್ಲ. ಎರಡನೇ ಡೋಸ್ ಕೂಡ ಸಿಗುತ್ತಿಲ್ಲ. ಸದ್ಯಕ್ಕೆ 18 ವರ್ಷದವರಿಗೂ ಸದ್ಯಕ್ಕೆ ಲಸಿಕೆ ಇಲ್ಲ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ನೀಡಲು ಆದ್ಯತೆ ನೀಡಲಿದ್ದು, ನಂತರದಲ್ಲಿ ಉಳಿದವರಿಗೆ ಲಸಿಕೆ ನೀಡಲಾಗುತ್ತದೆ ಎಂದರು.

ಜತೆಗೆ ಲಾಕ್ ಡೌನ್ ಅವಧಿಯಲ್ಲಿ ಶ್ರಮಿಕ ವರ್ಗಕ್ಕೆ ವಿಶೇಷ ನೆರವು ಬಗ್ಗೆ ಸದ್ಯ ಯಾವುದೇ ನಿರ್ಧಾರವನ್ನೂ ಕೈಗೊಳ್ಳುವುದು ಬೇಡ ಎಂದು ಕೊವಿಡ್ ಪರಿಸ್ಥಿತಿ ಅವಲೋಕಿಸಿ ನಡೆಸಿದ ಸಭೆ ನಿಶ್ಚಯಿಸಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss