Tuesday, September 9, 2025

BIG NEWS | ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ.

ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ಈ ಮೂಲಕ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. 452 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ.  

ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು. ಇವರಿಗೆ ಕೇವಲ 300 ಮತಗಳು ಮಾತ್ರ ಬಿದ್ದಿದ್ದವು.

ಸಂಸತ್ತಿನಲ್ಲಿ ಸೆಪ್ಟೆಂಬರ್ 9ರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ಚುನಾವಣೆ ನಡೆಯಿತು. ಸಂಜೆ 6 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಮತ ಚಲಾಯಿಸಿದರು.

ಲೋಕಸಭೆಯಲ್ಲಿ 542 ಸಂಸದರು ಮತ್ತು ರಾಜ್ಯಸಭೆಯಲ್ಲಿ 239 ಸಂಸದರು ಇದ್ದಾರೆ. ಎರಡೂ ಸದನಗಳಲ್ಲಿ ಒಟ್ಟು ಸದಸ್ಯರ ಸಂಖ್ಯೆ 781. ಈ ಪೈಕಿ 13 ಮಂದಿ ಮತ ಚಲಾಯಿಸಲಿಲ್ಲ. ಇನ್ನು ಎನ್‌ಡಿಎ 427 ಸದಸ್ಯ ಬಲ ಹೊಂದಿದ್ದರೆ ವಿಪಕ್ಷಗಳ ಸದಸ್ಯರ ಸಂಖ್ಯೆ 354. ಹೀಗಾಗಿ ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್ ನಿರೀಕ್ಷೆಯಂತೆಗೆ ಗೆಲುವಿನ ನಗೆ ಬೀರಿದರು.

ಇದನ್ನೂ ಓದಿ