BIG NEWS | ಹೃದಯಾಘಾತದಿಂದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾದ ಕ್ರಿಕೆಟ್‌ ದಂತಕಥೆ ಶೇನ್​ ವಾರ್ನ್​​ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಆಸ್ಟ್ರೇಲಿಯಾ ತಂಡದ ಕ್ರಿಕೆಟಿಗ ಲೆಗ್‌ಸ್ಪಿನ್ನರ್ ಶೇನ್ ವಾರ್ನ್ (52) ಇಂದು ಥೈಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ
ಥೈಲ್ಯಾಂಡ್ ನ ಕೊಹ್ ಸಮುಯಿಯಲ್ಲಿ ತಮ್ಮ ಮನೆಯಲ್ಲಿದ್ದ  ಶೇನ್ ವಾರ್ನ್ ಅವರಿಗೆ ಇಂದು ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಶೇನ್ ವಾರ್ನ್ ನಿಧನಕ್ಕೆ ಇಡೀ ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ.
ಆಸ್ಟ್ರೇಲಿಯಾ ಪರ 145 ಟೆಸ್ಟ್​​​, 194 ಏಕದಿನ ಹಾಗೂ 73 ಟಿ20 ಪಂದ್ಯಗಳನ್ನಾಡಿರುವ ಇವರು, ಕ್ರಮವಾಗಿ 708, 293 ಹಾಗೂ 70 ವಿಕೆಟ್ ಕಿತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!