Friday, July 1, 2022

Latest Posts

BIG NEWS | ಕೊರೋನಾ ಸೋಂಕಿಗೆ ಕವಿ ಡಾ. ಸಿದ್ದಲಿಂಗಯ್ಯ ನಿಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿಗೆ ದಲಿತ ಕವಿ ಡಾ. ಸಿದ್ದಲಿಂಗಯ್ಯ (67)ನಿಧನರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಮೇ.2ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆ, ಅಪೋಲೋ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳಿಗೆ ಸುತ್ತಾಡಿದ್ದರೂ ಬೆಡ್ ಸಿಕ್ಕಿರಲಿಲ್ಲ. ಅಂತಿಮವಾಗಿ ಡಿಸಿಎಂ ಡಾ.ಸಿಎನ್ ಅಶ್ವತ್ಥ್ ನಾರಾಯಣಗೆ ವಿಷಯ ತಿಳಿಯುತ್ತಿದ್ದಂತೆ ಕರೆ ಮಾಡಿ, ಬೆಡ್ ವ್ಯವಸ್ಥೆ ಮಾಡಿದ್ದರಿಂದಾಗಿರಂಗದೊರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬೆಡ್ ದೊರೆತು ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಯಿಂದ ಕಳೆದ ಸೋಮವಾರದಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು.
ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss