BIG NEWS | ಡಿ ನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರೀಂನಿಂದ ಮತ್ತೆ ಬಿಗ್ ರಿಲೀಫ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಯಡಿಯೂರಪ್ಪ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣದ ಸಂಬಂಧ ನೀಡಲಾಗಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ಹಿಂದೆ ಸುಪ್ರೀಂಕೋರ್ಟ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಆಲಂಪಾಷ ಆದೇಶ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

ಇದೀಗ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ಅಲಂಪಾಷಾ ಅರ್ಜಿ ವಜಾಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!