Wednesday, January 14, 2026
Wednesday, January 14, 2026
spot_img

BIG NEWS | ದೆಹಲಿ ಕಾರು ಸ್ಫೋಟ ಭಯೋತ್ಪಾದಕ ಕೃತ್ಯ: ಕೇಂದ್ರ ಸರಕಾರ ಅಧಿಕೃತ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಕಾರು ಸ್ಫೋಟ ಭಯೋತ್ಪಾದಕ ಕೃತ್ಯ ಎಂದು ಅಧಿಕೃತವಾಗಿ ಕೇಂದ್ರ ಸರಕಾರ ಘೋಷಿಸಿದೆ.

ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ದೆಹಲಿ ಕಾರು ಸ್ಫೋಟ ಅತ್ಯಂತ ಭೀಕರ ಭಯೋತ್ಪಾದಕ ಕೃತ್ಯ. ಇದಕ್ಕೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದಿದ್ದಾರೆ. ಕ್ಯಾಬಿನೆಟ್ ಈ ಕೃತ್ಯವನ್ನು ಉಗ್ರವಾಗಿ ಖಂಡಿಸಿದೆ. ಭಯೋತ್ಪಾದನೆ, ಉಗ್ರ ದಾಳಿ ವಿರುದ್ದ ಭಾರತ ಶೂನ್ಯ ಸಹಿಷ್ಣುತೆ ಹೊಂದಿದೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಸಂಪುಟ ಮುಗಿದ ಬೆನ್ನಲ್ಲೇ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಭದ್ರತಾ ಸಭೆ ನಡೆಯುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆದಾರ ಅಜಿತ್ ದೋವಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ದೆಹಲಿ ಕಾರು ಸ್ಫೋಟದ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೊದಲಿಗೆ ಈ ಭಯೋತ್ಪಾದ ಕೃತ್ಯದಲ್ಲಿ ಮಡಿದವರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಗಿದೆ. ಇದೇ ವೇಳೆ ಗಾಯಾಳುಗಳು ಶೀಘ್ರದಲ್ಲೇ ಚೇತರಿಕೆಗೆ ಪಾರ್ಥಿಸಲಾಯಿತು ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಘಟನೆಯ ಸಂತ್ರಸ್ತರಿಗೆ ಎಲ್ಲಾ ನೆರವು ಕೇಂದ್ರ ಸರ್ಕಾರ ನೀಡಲಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ. ವಿಳಂಬವಿಲ್ಲದೆ ಸಂತ್ರಸ್ತರಿಗೆ ನ್ಯಾಯ ಒದಗಿಸುತ್ತೇವೆ. ಈ ಭಯೋತ್ಪಾದ ಕೃತ್ಯದ ಪಲುದಾರರು, ಭಾಗಿಯಾದವರು, ಕೈಜೋಡಿಸಿದವರು ಸರಿದಂತೆ ಇದರ ಹಿಂದಿನ ಕಾಣದ ಕೈಗಳಿಗೂ ತಕ್ಕ ಶಾಸ್ತಿ ಮಾಡುತ್ತೇವೆ. ಉನ್ನತ ಅಧಿಕಾರಿಗಳ ತಂಡ ಈ ಪ್ರಕರಣ ತನಿಖೆ ಮಾಡುತ್ತಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

Most Read

error: Content is protected !!