ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಇ.ಡಿ ಅಧಿಕಾರಿಗಳ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸುತ್ತಿವೆ.
12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. ಇ.ಡಿ ಯಿಂದ ಕೇಜ್ರಿವಾಲ್ ಬಂಧನ ಸಾಧ್ಯತೆ ಇದೆ.