BIG NEWS| ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ.

ಸಾಕಷ್ಟು ವಿಚಾರಣೆ ಹಾಗೂ ತನಿಖೆಯ ಬಳಿಕ ಅಬಕಾರಿ ನೀತಿ ಅಕ್ರಮ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ಸಿಸೋಡಿಯಾರನ್ನು ಬಂಧನ ಮಾಡಿದೆ.8 ಗಂಟೆಗಳ ಕಾಲ ನಡೆದ ವಿಚಾರಣೆಯ ಬಳಿಕ ಅವರನ್ನು ಬಂಧಿಸಲಾಗಿದೆ.

ಸಿಬಿಐನಿಂದ ಮನೀಶ್‌ ಸಿಸೋಡಿಯಾ ಅವರ ವಿಚಾರಣೆ ನಡೆಯಲು ಆರಂಭವಾಗುತ್ತಿದ್ದಂತೆ ಆಮ್‌ ಆದ್ಮಿ ಪಕ್ಷದ ಕಾರ್ಯರ್ತರಿಂದ ಸಿಬಿಐ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಎಎಪಿ ಸಂಸದ ಸಂಜಯ್ ಸಿಂಗ್ ಮತ್ತು ಸಚಿವ ಗೋಪಾಲ್ ರೈ ಸೇರಿದಂತೆ 50 ಜನರನ್ನು ಪೊಲೀಸರು ಬಂಧಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!