ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಬೇಕಾಗಿದ್ದ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಕಿರಿಯ ಸಹೋದರಅನ್ಮೋಲ್ ಬಿಷ್ಣೋಯ್‌ನನ್ನು ಅಮೆರಿಕ ಗಡಿಪಾರು ಮಾಡಿದ್ದು, ಬುಧವಾರ ದೆಹಲಿಗೆ ಬಂದಿಳಿದ ಆತನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ಪಡೆದುಕೊಂಡಿದೆ.
ದೆಹಲಿ ಏರ್ಪೋರ್ಟ್‌ನಿಂದ ನೇರವಾಗಿ ಆತನನ್ನು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು.
ನವೆಂಬರ್ 18 ರಂದು ಅಮೆರಿಕದಿಂದ ಗಡಿಪಾರಾಗಿದ್ದ ಅನ್ಮೋಲ್ ಬಿಷ್ಣೋಯ್, ಭಾರತಕ್ಕೆ ಆಗಮಿಸುತ್ತಿದ್ದಂತೆ ಎನ್‌ಐಎ ತಂಡ ಆತನನ್ನು ವಶಕ್ಕೆ ಪಡೆದಿದೆ. ಇಬ್ಬರು ಎನ್‌ಐಎ ಅಧಿಕಾರಿಗಳ ನಡುವೆ ಅನ್ಮೋಲ್ ಇರುವ ಮೊದಲ ಚಿತ್ರ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿಹತ್ಯೆಯ ಸಂಚು, ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಮತ್ತು ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ನಡೆದಿದ್ದ ಗುಂಡಿನ ದಾಳಿ, ಶಸ್ತ್ರಾಸ್ತ್ರ ಪೂರೈಕೆ, ಲಾಜಿಸ್ಟಿಕ್ಸ್ ಒದಗಿಸುವುದು ಸೇರಿದಂತೆ ಒಟ್ಟು ಹದಿನೆಂಟು ಕ್ರಿಮಿನಲ್ ಪ್ರಕರಣಗಳು ಅನ್ಮೋಲ್ ಮೇಲೆ ದಾಖಲಾಗಿದೆ.

