BIG NEWS | ಮತ್ತೆ ಅಧಿವೇಶನಕ್ಕೆ ಅಡ್ಡಿ: ರಾಜ್ಯಸಭಾ ಕಲಾಪದಿಂದ 19 ಸಂಸದರು ಸಸ್ಪೆಂಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಲೋಕಸಭೆಯಲ್ಲಿ ಬೆಲೆ ಏರಿಕೆ, ಜಿಎಸ್​​​ಟಿ ಹೆರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ 19 ಸಂಸದರು ವಾರಗಳ ಕಾಲ ರಾಜ್ಯಸಭಾ ಕಲಾಪದ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ ಎಂದು ಸಭಾಪತಿ ಮಹತ್ವದ ಆದೇಶ ಹೊರಡಿಸಿದ್ದಾರೆ.

ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕಲಾಪದೊಳಗೆ ಕೈಯಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದರಿಂದ ಕಲಾಪಕ್ಕೆ ಅಡ್ಡಿಯಾಗಿದೆ. ಹೀಗಾಗಿ, ಟಿಎಂಸಿ ಸಂಸದೆ ಸುಶ್ಮಿತಾ ದೇವ್​,ಡಾ ಸಂತಾನು ಸೇನ್​, ಡೋಲಾ ಸೇನ್ ಸೇರಿದಂತೆ 19 ರಾಜ್ಯಸಭಾ ಸಂಸದರು ಅಮಾನತುಗೊಂಡಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಪ್ರತಿಪಕ್ಷಗಳು ಕಲಾಪಕ್ಕೆ ಅಡ್ಡಿ ಮಾಡ್ತಿದ್ದು, ಸರಾಗವಾಗಿ ಅಧಿವೇಶನ ನಡೆಯಲು ಬಿಡುತ್ತಿಲ್ಲ.ಹೀಗಾಗಿ, ಯಾವುದೇ ವಿಷಯದ ಬಗ್ಗೆ ಗಂಭೀರವಾದ ಚರ್ಚೆ ನಡೆದಿಲ್ಲ. ಇಂದು ಬೆಳಗ್ಗೆ 11 ಗಂಟೆಗೆ ಸದನ ಸಮಾವೇಶಗೊಂಡ ಬಳಿಕ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಶ್ರದ್ಧಾಂಜಲಿ ಅರ್ಪಿಸಿದ ತಕ್ಷಣ, ಪ್ರತಿಪಕ್ಷಗಳ ಸದಸ್ಯರು ಬೆಲೆ ಏರಿಕೆ ಮತ್ತು ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ದರ ಏರಿಕೆಯ ವಿರುದ್ಧ ಪ್ರತಿಭಟನೆ ಆರಂಭಿಸಿದರು. ಭಿತ್ತಿ ಪತ್ರಗಳನ್ನು ಹಿಡಿದು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ಇಳಿದರು. ಹೀಗಾಗಿ, ಸಭಾಪತಿ ಈ ನಿರ್ಧಾರ ಕೈಗೊಂಡಿದ್ದಾರೆ.

ಅಶಿಸ್ತಿನ ವರ್ತನೆಗಾಗಿ ಮುರಳೀಧರನ್, ಹಕ್, ಸೇನ್, ಅಬೀರ್ ಬಿಸ್ವಾಸ್, ಮೌಸಮ್ ನೂರ್, ಸುಶ್ಮಿತಾ ದೇವ್, ಶಾಂತಾ ಛೆಟ್ರಿ, ಮೊಹಮ್ಮದ್ ಅಬ್ದುಲ್ಲಾ, ಎಎ ರಹೀಮ್, ಕನಿಮೋಳಿ, ಎಲ್ ಯಾದವ್ ಮತ್ತು ವಿ ಶಿವದಾಸನ್ ಅಮಾನತುಗೊಂಡಿದ್ದಾರೆ.
ನಿನ್ನೆ ಕೂಡ ಇದೇ ವಿಚಾರವಾಗಿ ಕಾಂಗ್ರೆಸ್​ನ ನಾಲ್ವರು ಸಂಸದರು ಮಳೆಗಾಲದ ಅಧಿವೇಶನದಿಂದ ಸಂಪೂರ್ಣವಾಗಿ ಅಮಾನತುಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!