ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯ ಸರ್ಕಾರಕ್ಕೆ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ.
5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಇಂದು ಇದರ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.