BIG NEWS | ಹಾರಾಟದ ವೇಳೆ ಕಿಟಕಿ ಗಾಜಿನಲ್ಲಿ ಬಿರುಕು: ಗೋ ಏರ್ ವಿಮಾನ ತುರ್ತು ಭೂಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಗಸದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ಕಿಟಕಿ ಗಾಜಿನಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿ-ಗುವಾಹತಿ ನಡುವೆ ಸಂಚರಿಸುತ್ತಿದ್ದ ಗೋ ಏರ್ ಸಂಸ್ಥೆಯ ವಿಮಾನ ಜೈಪುರದಲ್ಲಿ ತುರ್ತು ಭೂಸ್ಪರ್ಶಗೊಂಡಿದೆ.
ಯಾವುದೇ ಆತಂಕಗೊಳ್ಳಬೇಕಾಗಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದು, ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರವಷ್ಟೇ ಇದೇ ಸಂಸ್ಥೆಯೆ ಮುಂಬೈ-ಲೇಹ್, ಶ್ರೀನಗರ-ದೆಹಲಿ ವಿಮಾನಗಳು ತಾಂತ್ರಿಕ ದೋಷ ಎದುರಿಸಿದ್ದವು ಎಂಬುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!