ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ನೆರೆಯ ರಾಷ್ಟ್ರ ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪನ ಸಂಭವಿಸಿದೆ.
ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ, ಶುಕ್ರವಾರ ಸಂಜೆ ನೇಪಾಳದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ. ಸ್ಥಳೀಯ ಕಾಲಮಾನ ರಾತ್ರಿ 7.52ಕ್ಕೆ (ಸ್ಥಳೀಯ ಕಾಲಮಾನ) ಭೂಮಿಯಿಂದ 20 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ. ಇದರ ಪರಿಣಾಮ ಉತ್ತರ ಭಾರತದಲ್ಲೂ ಲಘು ಭೂಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.
ಇತ್ತೀಚೆಗಷ್ಟೇ ಮ್ಯಾನ್ಮಾರ್‌ನಲ್ಲಿ 7.7 ತೀವ್ರತೆಯೇ ಭಾರೀ ಭೂಕಂಪ ಸಂಭವಿಸಿತ್ತು. ಸಾವಿರಾರು ಸಂಖ್ಯೆಯ ಜನ ಸಾವನ್ನಪ್ಪಿದ್ದಾರೆ.