BIG NEWS | ಕೊನೆಗೂ ನಂದಿನಿ ಹಾಲು, ಮೊಸರಿನ ದರ ಹೆಚ್ಚಳ: ನಾಳೆಯಿಂದಲೇ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಅಂತೂ ಕೆಎಂಎಫ್‌ ತನ್ನ ಬ್ರ್ಯಾಂಡ್‌ ನಂದಿನಿ ಹಾಲು ಮತ್ತು ಮೊಸರಿನ ದರದಲ್ಲಿ ಪ್ರತಿ ಲೀಟರ್‌ಗೆ ತಲಾ 2 ರೂ. ಏರಿಕೆ ಮಾಡಿದೆ.

ಕೆಲದಿನಗಳ ಹಿಂದೆ ಬೆಲೆ ಏರಿಕೆ ಮಾಡುವ ನಿರ್ಧಾರ ಮಾಡಿದ್ದ ಕೆಎಂಎಫ್‌ ಬಳಿಕ ಸರ್ಕಾರ ಬ್ರೇಕ್‌ ಹಾಕಿತ್ತು.

ಇದೀಗ 19 ನಿರ್ದೇಶಕರೊಂದಿಗೆ ಸಭೆ ನಡೆಸಿದ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ನಂದಿನಿ ಹಾಲು, ಮೊಸರಿನ ದರವನ್ನು ಪ್ರತಿ ಲೀಟರ್ ಗೆ 2 ರೂ ಹೆಚ್ಚಳ ಮಾಡಲಾಗಿದೆ. ದರ ಹೆಚ್ಚಳದ ಸೌಲಭ್ಯವನ್ನು ರೈತರು ಪಡೆಯಲಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕೊನೆಗೂ ಅಳೆದು ತೂಗಿ ನಂದಿನ ಹಾಲು, ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ.

ಉತ್ಪಾದಕರಿಗೆ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಹಾಗೂ ರಾಜ್ಯದ ಗಡಿ ಪ್ರದೇಶಗಳಲ್ಲಿ ನೆರೆ ರಾಜ್ಯಗಳ ಹಾಲು ಉತ್ಪಾದಕ ಸಂಸ್ಥೆಗಳತ್ತ ರಾಜ್ಯದ ರೈತರು ವಾಲುತ್ತಿರುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.

ಈಗ ಹೆಚ್ಚಳ ಮಾಡಿರುವ ದರವು ಗುರುವಾರದಿಂದಲೇ ಜಾರಿಗೆ ಬರಲಿದೆ. ಆದರೆ ಗುರುವಾರ ಬೆಳಗ್ಗೆ ಹಾಲಿನ ದರ ಈಗಿನಷ್ಟೇ ಇರಲಿದೆ. ಆದರೆ ಬೆಳಗ್ಗೆ 11 ಗಂಟೆಯ ನಂತರ ಹೊಸ ದರ ಅನ್ವಯ ಆಗಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!