BIG NEWS | ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.
ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್​​ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!